Home Crimeಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು..!

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು..!

by shiv
0 comments

ಮಂಗಳೂರಿನಲ್ಲಿ ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿ ತನ್ನ ಆರು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು.ಕೌಟುಂಬಿಕ ಕಲಹದ ಕಾರಣ ತನ್ನ ಆರು ವರ್ಷದ ಮಗಳೊಂದಿಗೆ ತಣ್ಣೀರುಬಾವಿ ಬೀಚ್​ನಲ್ಲಿ ವೀಡಿಯೋ ಮಾಡಿದ್ದು, ವೈರಲ್ ವೀಡಿಯೋ ಸುಳಿವಿನಿಂದ ಸ್ಥಳಕ್ಕೆ ಧಾವಿಸಿದ ಮಂಗಳೂರು ಪೊಲೀಸರು, ಸಮಯಪ್ರಜ್ಞೆ ಮೆರೆದು ತಂದೆ-ಮಗಳನ್ನು ರಕ್ಷಿಸಿದ್ದಾರೆ.

ಮಂಗಳೂರು, ನವೆಂಬರ್ 5: ಕೌಟುಂಬಿಕ ಕಲಹಕ್ಕೆ ಬೇಸತ್ತು 6 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮಂಗಳೂರು (Mangaluru) ಪೊಲೀಸ್‌ ಇಲಾಖೆ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಕಾರಣ ತನ್ನ ಆರು ವರ್ಷದ ಮಗಳೊಂದಿಗೆ ತಣ್ಣೀರುಬಾವಿ ಬೀಚ್​ನಲ್ಲಿ ವೀಡಿಯೋ ಮಾಡಿದ್ದು, ವೈರಲ್ ವೀಡಿಯೋ ಮೂಲಕವೇ ಆತನನ್ನು ಪತ್ತೆ ಹಚ್ಚಿದ ಪೊಲೀಸರು, ಆತನನ್ನು ರಕ್ಷಿಸಿದ್ದಾರೆ.

ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಯತ್ನ

7 ವರ್ಷಗಳ ಹಿಂದೆ ಬಜ್ಪೆ ಪ್ರದೇಶದ ಯುವತಿಯನ್ನು ರಾಜೇಶ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ದಂಪತಿ ನಡವೆ ಇತ್ತೀಚೆಗೆ ಜಗಳಗಳು ಶುರುವಾಗಿದ್ದವು. ಹೆಚ್ಚಾದ ಕೌಟುಂಬಿಕ ಕಲಹದಿಂದ ಬೇಸತ್ತ ರಾಜೇಶ್, ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು.

ವೈರಲ್ ವೀಡಿಯೋದಿಂದ ರಾಜೇಶ್ ಪತ್ತೆ

ಮೊದಲಿಗೆ ತನ್ನ 6 ವರ್ಷದ ಮಗಳನ್ನು ಕರೆದುಕೊಂಡು ತಣ್ಣೀರುಬಾವಿ ಬೀಚ್‌ಗೆ ಹೋಗಿದ್ದರು. ಈ ವೇಳೆ ಸಾಯುವುದು ಬೇಡವೆಂದು ಪುಟ್ಟ ಮಗಳು ತನ್ನ ತಂದೆಗೆ ಅಂಗಲಾಚಿ ಬೇಡಿದ್ದಳು. ತನ್ನ ಮಗಳೊಂದಿಗೆ ಆತ್ಮಹತ್ಯೆಗೆ ಸಮುದ್ರ ಕಿನಾರೆಗೆ ತೆರಳುತ್ತಿರುವ ವೀಡಿಯೋ ಮಾಡಿ, ತನ್ನ ಅಕ್ಕ ಹಾಗೂ ಸಂಬಂಧಿಕರಿಗೆ ಕಳುಹಿಸಿದ್ದರು. ಹೀಗೆ ಕಳುಹಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Have any thoughts?

Share your reaction or leave a quick response — we’d love to hear what you think!

You may also like