8
ಬೆಂಗಳೂರು, ನ.8: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಗಳು ಮತ್ತು ಉಗ್ರರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ. ಈ ಬಗ್ಗೆ ವಿಡಿಯೋಗಳು ಕೂಡ ವೈರಲ್ ಆಗಿದ್ದು, ಈ ವಿಚಾರವಾಗಿ ಮಾಧ್ಯಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಪ್ರಶ್ನಿಸಿದೆ.

ಆದರೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ, ಜೈಲಿನಲ್ಲಿ ಮೊಬೈಲ್ ನೀಡಿ ರೌಡಿಗಳು ಮತ್ತು ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಇದೀಗ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕೈದಿಗಳಿಗೆ ದೊರೆಯುತ್ತಿರುವ ವಿಐಪಿ ಸೌಲಭ್ಯಗಳು ಮತ್ತು ಮೊಬೈಲ್ ಫೋನ್ಗಳು ದೇಶದ ಭದ್ರತೆಗೆ ಗಂಭೀರ ಸವಾಲೊಡ್ಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಆತಂಕ ವ್ಯಕ್ತಪಡಿಸಿದ್ದಾರೆ.
Have any thoughts?
Share your reaction or leave a quick response — we’d love to hear what you think!