ಬೆಂಗಳೂರು ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬಿಎಂಆರ್ಸಿಎಲ್ಗೆ ಬೆದರಿಕೆ ಇಮೇಲ್ ಬಂದಿದೆ. ನವೆಂಬರ್ 14ರ ರಾತ್ರಿ ಬಂದ ಈ ಇಮೇಲ್ನಲ್ಲಿ, ಮೆಟ್ರೋ ಸಿಬ್ಬಂದಿಯಾಗಿರುವ ತನ್ನ ಮಾಜಿ ಪತ್ನಿಗೆ ಕಿರುಕುಳ ನೀಡಿದರೆ ಮೆಟ್ರೋ ಬ್ಲಾಸ್ಟ್ ಮಾಡುವುದಾಗಿ ವ್ಯಕ್ತಿ ಬೆದರಿಸಿದ್ದಾನೆ. ಬಿಎಂಆರ್ಸಿಎಲ್ ದೂರಿನ ಮೇರೆಗೆ ವಿಲ್ಸನ್ ಗಾರ್ಡನ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರು, ನವೆಂಬರ್ 18: ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು (Metro Station Bomb Threat) ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್ ಒಂದು ಬಿಎಂಆರ್ಸಿಎಲ್ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್ಸಿಎಲ್ (BMRCL) ಅಧಿಕೃತ ಇಮೇಲ್ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆಂದು ಬರೆದಿದ್ದಾನೆ.ಇಮೇಲ್ನಲ್ಲಿ, ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ. ನಾನು ಉಗ್ರಗಾಮಿಯಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಬೆದರಿಕೆ ಹಾಕಲಾಗಿದೆ. ಮೇಲ್ ಪರಿಶೀಲಿಸಿದ ಬಳಿಕ ಬಿಎಂಆರ್ಸಿಎಲ್ ಅಧಿಕಾರಿ ತಕ್ಷಣವೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
Have any thoughts?
Share your reaction or leave a quick response — we’d love to hear what you think!