Home EntertainmentIND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ; ಭಾರತ ತಂಡಕ್ಕೆ ರಿಷಭ್ ಪಂತ್ ರಿಟರ್ನ್

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ; ಭಾರತ ತಂಡಕ್ಕೆ ರಿಷಭ್ ಪಂತ್ ರಿಟರ್ನ್

by shiv
0 comments

India vs South Africa Test at Eden Gardens: ಭಾರತ ಮತ್ತು ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಮಹತ್ವದ ಪಂದ್ಯ 15 ವರ್ಷಗಳ ನಂತರ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಐತಿಹಾಸಿಕವಾಗಿ ಭಾರತ 2-1 ಮುನ್ನಡೆ ಸಾಧಿಸಿದೆ. 25 ವರ್ಷಗಳಿಂದ ಭಾರತದಲ್ಲಿ ಸರಣಿ ಗೆಲ್ಲಲು ದಕ್ಷಿಣ ಆಫ್ರಿಕಾ ಕಾಯುತ್ತಿದೆ. ಪ್ರಸ್ತುತ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದೆ, ಭಾರತ ಮೊದಲು ಬೌಲಿಂಗ್ ಮಾಡಲಿದೆ. ಉಭಯ ತಂಡಗಳ ದಾಖಲೆಗಳು ರೋಚಕ ಕದನಕ್ಕೆ ಸಾಕ್ಷಿಯಾಗಲಿವೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ತಂಡಗಳು 15 ವರ್ಷಗಳ ನಂತರ ಈಡನ್ ಗಾರ್ಡನ್ಸ್‌ನಲ್ಲಿ ಟೆಸ್ಟ್ ಪಂದ್ಯವನ್ನು ಆಡುತ್ತಿವೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯವು 1996 ರಲ್ಲಿ ಈ ಮೈದಾನದಲ್ಲಿ ನಡೆದಿತ್ತು. ಅಂದಿನಿಂದ, 2010 ರವರೆಗೆ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರು ಟೆಸ್ಟ್ ಪಂದ್ಯಗಳು ಈಡನ್ ಗಾರ್ಡನ್ಸ್‌ನಲ್ಲಿ (Eden Gardens) ನಡೆದಿದ್ದು, ಇದರಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. 2000 ಇಸವಿಯಿಂದ ದಕ್ಷಿಣ ಆಫ್ರಿಕಾ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಇದರರ್ಥ ಸರಣಿ ಗೆಲುವಿಗಾಗಿ ಹರಿಣಗಳ ಕಾಯುವಿಕೆ 25 ವರ್ಷಗಳಿಂದ ಮುಂದುವರೆದಿದೆ. ಈ ಅಂಕಿಅಂಶಗಳನ್ನು ಗಮನಿಸಿದರೆ, ಪ್ರಸ್ತುತ ಸರಣಿಯಲ್ಲಿ ಭಾರತಕ್ಕೆ ಸ್ವಲ್ಪ ಮುನ್ನಡೆ ಇದೆ.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬ ಬವುಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಆಫ್ರಿಕಾ ತಂಡದ ಸ್ಟಾರ್ ವೇಗದ ಕಗಿಸೊ ರಬಾಡ ಈ ಪಂದ್ಯದಲ್ಲಿ ಆಡುತ್ತಿಲ್ಲಹೀಗಾಗಿ ಕಾರ್ಬಿನ್ ಬಾಷ್ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆದಿದ್ದಾರೆಏತನ್ಮಧ್ಯೆಭಾರತದ ಪ್ಲೇಯಿಂಗ್-11 ರಲ್ಲಿ ಎರಡು ಬದಲಾವಣೆಗಳಿವೆರಿಷಭ್ ಪಂತ್ ತಂಡಕ್ಕೆ ಮರಳಿದ್ದುನಿತೀಶ್ ರೆಡ್ಡಿ ಬದಲಿಗೆ ಆಡಲಿದ್ದಾರೆಪಂತ್ ಜೊತೆಗೆ ಅಕ್ಷರ್ ಪಟೇಲ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆಇದರರ್ಥ ಟೀಂ ಇಂಡಿಯಾ ನಾಲ್ಕು ಸ್ಪಿನ್ನರ್‌ಗಳೊಂದಿಗೆ ಆಡುತ್ತಿದೆಅವರಲ್ಲಿ ಮೂವರು ಆಲ್‌ರೌಂಡರ್‌ಗಳಿದ್ದಾರೆಸಾಯಿ ಸುದರ್ಶನ್ ಈ ಪಂದ್ಯವನ್ನು ಆಡುತ್ತಿಲ್ಲವಾದುದ್ದರಿಂದ ಸುಂದರ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು.

ಉಭಯ ತಂಡಗಳ ಟೆಸ್ಟ್ ದಾಖಲೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 45 ನೇ ಟೆಸ್ಟ್ ಪಂದ್ಯ ಇದಾಗಿದೆ . ಈ ಮೊದಲು ಆಡಿರುವ 44 ಟೆಸ್ಟ್‌ಗಳಲ್ಲಿ ಭಾರತ 16 ರಲ್ಲಿ ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 18 ರಲ್ಲಿ ಗೆದ್ದಿದೆ. ಹತ್ತು ಟೆಸ್ಟ್‌ಗಳು ಡ್ರಾದಲ್ಲಿ ಕೊನೆಗೊಂಡಿವೆ. ಹಾಗೆಯೇ ಇದು ಭಾರತದ ನೆಲದಲ್ಲಿ ಈ ಎರಡೂ ತಂಡಗಳ ನಡುವಿನ 20 ನೇ ಟೆಸ್ಟ್ ಪಂದ್ಯವಾಗಲಿದೆ. ಈ ಹಿಂದೆ ಆಡಿದ 19 ಟೆಸ್ಟ್‌ಗಳಲ್ಲಿ ಭಾರತ 11 ರಲ್ಲಿ ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ ಐದು ಪಂದ್ಯಗಳನ್ನು ಗೆದ್ದಿದೆ. ಮೂರು ಟೆಸ್ಟ್‌ಗಳು ಡ್ರಾದಲ್ಲಿ ಕೊನೆಗೊಂಡಿವೆ.

ಉಭಯ ತಂಡಗಳು

ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶುಭ್​ಮನ್ ಗಿಲ್(ನಾಯಕ), ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ತೆಂಬ ಬವುಮಾ (ನಾಯಕ), ಟೋನಿ ಡಿ ಜೊರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಸೈಮನ್ ಹಾರ್ಮರ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್ ಮತ್ತು ಕೇಶವ್ ಮಹಾರಾಜ್.

Have any thoughts?

Share your reaction or leave a quick response — we’d love to hear what you think!

You may also like