Home EntertainmentIND vs SA: ಆಯ್ಕೆ ಮಾಡಿ ನಿತೀಶ್ ಕುಮಾರ್ ರೆಡ್ಡಿಯನ್ನು ಕೈ ಬಿಟ್ಟಿದ್ದೇಕೆ?

IND vs SA: ಆಯ್ಕೆ ಮಾಡಿ ನಿತೀಶ್ ಕುಮಾರ್ ರೆಡ್ಡಿಯನ್ನು ಕೈ ಬಿಟ್ಟಿದ್ದೇಕೆ?

by shiv
0 comments

Nitish Kumar Reddy: ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಾಯಗೊಂಡಿದ್ದರು. ಈ ಗಾಯದಿಂದ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​​ಗೆ ಪರಿಗಣಿಸಲಾಗಿಲ್ಲ. ಅತ್ತ ಬೆಂಚ್ ಕಾಯುವ ಬದಲು ಭಾರತ ಎ ಪರ ಏಕದಿನ ಸರಣಿಯಲ್ಲಿ ಕಣಕ್ಕಿಳಿದು ಫಿಟ್​​​ನೆಸ್ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ (ನ.14) ಶುರುವಾಗಲಿದೆ. ಈ ಸರಣಿಗೆ ಆಯ್ಕೆಯಾಗಿದ್ದ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಮೊದಲ ಪಂದ್ಯಕ್ಕೂ ಮುನ್ನ ತಂಡದಿಂದ ಕೈ ಬಿಡಲಾಗಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಮ್ಯಾಚ್​ಗೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ಅವರನ್ನು ತಂಡದಿಂದ ಕೈ ಬಿಟ್ಟಿದ್ದೇಕೆ? ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಮುಖ್ಯ ಕಾರಣ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗಿಟ್ಟಿರುವುದು.ಮೊದಲ ಟೆಸ್ಟ್ ಪಂದ್ಯದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಧ್ರುವ್ ಜುರೆಲ್​ ಸ್ಥಾನ ಪಡೆಯಲಿದ್ದಾರೆ. ಸೌತ್ ಆಫ್ರಿಕಾ ‘ಎ’ ವಿರುದ್ಧದ ಪಂದ್ಯಗಳಲ್ಲಿ ಜುರೆಲ್ ಎರಡು ಅಜೇಯ ಶತಕಗಳನ್ನು ಬಾರಿಸಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ​ದಲ್ಲಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಅಷ್ಟೇ ಅಲ್ಲದೆ ಈಡನ್ ಗಾರ್ಡನ್ಸ್ ಮೈದಾನವು ಸ್ಪಿನ್ ಸ್ನೇಹಿ ಪಿಚ್ ಹೊಂದಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿದೆ. ಅದರಂತೆ ಆಲ್​​ರೌಂಡರ್ ಗಳಾಗಿ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.ಇತ್ತ ಮೂವರು ಸ್ಪಿನ್ ಆಲ್​​ರೌಂಡರ್​​ಗಳನ್ನು ಕಣಕ್ಕಿಳಿಸಿದರೆ ನಿತೀಶ್ ಕುಮಾರ್ ರೆಡ್ಡಿ ಬೆಂಚ್ ಕಾಯಬೇಕಾಗುತ್ತದೆ. ಹೀಗಾಗಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದ್ದು, ಭಾರತ ಎ ಮತ್ತು ಸೌತ್ ಆಫ್ರಿಕಾ ಎ ನಡುವಣ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಮೂಲಕ ಫಿಟ್​​​ನೆಸ್ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ.

ಭಾರತ ಟೆಸ್ಟ್​ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್.

Have any thoughts?

Share your reaction or leave a quick response — we’d love to hear what you think!

You may also like